ನ್ಯೂಸ್ ನಾಟೌಟ್: ಬೆಳ್ಳಾರೆಯಲ್ಲಿ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ.
ಬೆಳ್ಳಾರೆಯಲ್ಲಿ ಜೂ.9ರಂದು ರಾತ್ರಿ ಕುಡಿದ ಮತ್ತಿನಲ್ಲಿ ಜಯ ಕುಮಾರ್ ಕಲ್ಮಡ್ಕ ಎಂಬಾತ ಪಾಟಾಜೆ ಸುಂದರ ಎಂಬವರ ಪತ್ನಿ ನಳಿನಿ ಅನ್ನುವವರನ್ನು ಬೆಳ್ಳಾರೆಯ ಪೇಟೆಯಲ್ಲಿ ಹತ್ಯೆ ಮಾಡಿದ್ದ. ಈ ಪ್ರಕರಣ ಮರುದಿನ ಬೆಳಗ್ಗೆ ಭಾರಿ ಸುದ್ದಿಯಾಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪೊಲೀಸರು ಮಂಗಳವಾರ ಆರೋಪಿಯನ್ನು ಬಂಧಿಸಿದ್ದರು. ಆರೋಪಿಯ ಸ್ಥಳ ಮಹಜರು ನಡೆಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.