ಪ್ರಮಾಣವಚನಕ್ಕೆ ಗೈರಾಗಿದ್ದ ಹೆಚ್.​ಡಿ ದೇವೇಗೌಡಗೆ ಕರೆ ಮಾಡಿದ ಪ್ರಧಾನಿ ಮೋದಿ..! ಈ ಬಗ್ಗೆ ದೇವೇಗೌಡ್ರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡದ್ದೇನು..?

ನ್ಯೂಸ್ ನಾಟೌಟ್: ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಹೇಳಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಹೆಚ್.​ಡಿ ದೇವೇಗೌಡಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ವರದಿ ತಿಳಿಸಿದೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.​ “ಜೂನ್​ 9 ರಂದು ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಆಗಲಿಲ್ಲ. ಆದರೆ ನಾನು ಟಿವಿಯಲ್ಲಿ ಸಮಾರಂಭವನ್ನು ನೋಡಿದ್ದೇನೆ. ಕಾಂಗ್ರೆಸ್ ಏನೇ ಹೇಳಿದರೂ ಭಾರತೀಯ ಪ್ರಜಾಪ್ರಭುತ್ವ ಸದೃಢವಾಗಿದೆ” ಎಂದು ಹೆಚ್​ಡಿ ದೇವೇಗೌಡ ಜೂನ್​9 ರಂದು ಹೇಳಿದ್ದರು. ಲೋಕಸಭೆ ಚುನಾವಣೆಗೆ 8 ತಿಂಗಳು ಇರುವಾಗಲೇ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡವು. ಈ ಮೈತ್ರಿ ಹಿಂದೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ತಂತ್ರಗಾರಿಕೆ ಇದೆ ಎಂದು ವಿಶ್ಲೇಷಿಸಲಾಗಿತ್ತು. Click 👇