ಮಸೀದಿ ಎದುರು ಡಿಜೆ ಸೌಂಡ್ ಹಾಕಿ ಕುಣಿದ ಹಿಂದೂಗಳು..! ಕೆಂಪೇಗೌಡರ ಉತ್ಸವ ಪಲ್ಲಕ್ಕಿ ತಡೆದು ಗಲಾಟೆ..! ಯುವಕರೊಂದಿಗೆ ಆಶ್ಲೀಲ ನೃತ್ಯ..!

ನ್ಯೂಸ್ ನಾಟೌಟ್: ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಇಂದು (ಜೂನ್ 27) ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿದ ವೇಳೆ ಮೆರವಣಿಗೆ ತಡೆದು ಮಸೀದಿ ಮುಂಬಾಗ ಗಲಾಟೆ ನಡೆದಿದೆ. ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಮಸೀದಿ ಎದುರು ಡಿಜೆ ಸೌಂಡ್ ಹಾಕಿಕೊಂಡು ಹೋಗಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ. ಇನ್ನು ಇದೇ ಕೋಲಾರದಲ್ಲಿ ನಡೆದ ಕೆಂಪೇಗೌಡ ಜಯಂತಿ ಮೆರವಣಿಗೆಯಲ್ಲಿ ಮಂಗಳಮುಖಿಯರು ಅಸಭ್ಯ ನೃತ್ಯ ಮಾಡಿದ್ದಾರೆ. ಸಾರ್ವಜನಿಕವಾಗಿ ಅರ್ಧಂಬರ್ಧ, ತುಂಡು ಬಟ್ಟೆ ತೊಟ್ಟು ಯುವಕರೊಂದಿಗೆ ಆಶ್ಲೀಲ ನೃತ್ಯ ಮಾಡಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Click 👇