ಕೊಡಗು: ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ..! ಇನ್ನೂ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ..!

ನ್ಯೂಸ್ ನಾಟೌಟ್: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಹಲವು ನದಿ ಮತ್ತು ಇತರ ಜಲಾಶಯಗಳು ತುಂಬಿ ಹರಿಯುತ್ತಿವೆ. ಮಡಿಕೇರಿ, ಭಾಗಮಂಡಲ ನಾಪೋಕ್ಲು ಸೇರಿದಂತೆ ಹಲವೆಡೆ ವರುಣಾರ್ಭಟ ಜೋರಾಗಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರ ಭಾಗಮಂಡಲದ‌ ತ್ರಿವೇಣಿ ಸಂಗಮ ಭರ್ತಿಯಾಗಿದೆ. ತ್ರಿವೇಣಿ ಸಂಗಮವು ಕಾವೇರಿ, ಕನ್ನಿಕೆ & ಸುಜೋತಿ ನದಿಗಳು ಸೇರುವ ಸ್ಥಳ. ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದೆ. ಹೀಗಿ ಮಳೆ ಹೆಚ್ಚಾದರೆ ಭಾಗಮಂಡಲ – ನಾಪೋಕ್ಲು ನಡುವಿನ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಕುಮಾರಧಾರ ಮತ್ತು ನೇತ್ರಾವತಿ ನದಿಗಳು ಭರ್ತಿಯಾಗುವ ಹಂತದಲ್ಲಿದ್ದು, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ಮಹಾಕಾಳಿ ಕ್ಷೇತ್ರದ ನದಿಗಳ ಸಂಗಮಕ್ಕೆ ಜನರು ಎದುರು ನೋಡುತ್ತಿದ್ದಾರೆ. Click 👇