ನ್ಯೂಸ್ ನಾಟೌಟ್: ಕೊಡಗು ಜಿಲ್ಲೆಯ ಕೊಯನಾಡಿನ ಸಮೀಪ ಗುಡ್ಡವೊಂದು ಸರ್ಕಾರಿ ಶಾಲೆಯ ಹಿಂಬದಿಯ ಗೋಡೆಯ ಮೇಲೆ ಕುಸಿದು ಬಿದ್ದುದರಿಂದ ಕೊಠಡಿಯ ಗೋಡೆ ನುಚ್ಚು ನೂರಾಗಿದೆ.
ಗುರುವಾರ (ಜೂ.27) ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ಶಾಲೆಗಳಿಗೆ ರಜೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಯಾರೂ ಇರಲಿಲ್ಲ. ಹೀಗಾಗಿ ಭಾರಿ ದುರಂತವೊಂದು ತಪ್ಪಿದಂತಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಶಾಲೆಯಲ್ಲಿ 80 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಬಾರಿಯೂ ಇದೇ ಸಮಸ್ಯೆಯನ್ನು ಮಳೆಗಾಲದ ಸಮಯದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಅನುಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.