ನ್ಯೂಸ್ ನಾಟೌಟ್ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಬಿದ್ದ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ(ಜೂ.29) ನಡೆದಿದೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಸರ್ವಿಸ್ ರಸ್ತೆಯಲ್ಲಿದ್ದ ಕಾರು, ಬೈಕ್ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ನುಗ್ಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 8 ಪ್ರಯಾಣಿಕರಿಗೆ ಗಾಯವಾಗಿದ್ದು, ಚಾಲಕನ ಕಾಲು ಮುರಿದಿದೆ ಎಂದು ವರದಿ ತಿಳಿಸಿದೆ.
ಗಾಯಾಳುಗಳನ್ನು ಮಂಡ್ಯ, ಮೈಸೂರು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ನಲ್ಲಿ 30 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ 1 ಕಾರು ಹಾಗೂ 4ಕ್ಕೂ ಹೆಚ್ಚು ಬೈಕ್ಗಳು ಜಖಂಗೊಂಡಿದೆ. ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Click 👇