ನ್ಯೂಸ್ ನಾಟೌಟ್: ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಿಂದ ರಕ್ಷಿಸುವುದಕ್ಕಾಗಿ ಶ್ರೀರಾಮ ಸೇನೆ ಆರಂಭಿಸಿರುವ ಸಹಾಯವಾಣಿಗೆ 4 ದಿನದಲ್ಲಿ 17 ಬೆದರಿಕೆ ಕರೆಗಳು ಬಂದಿವೆ.
ಮೇ29ರಂದು ಹಿಂದೂ ಯುವತಿಯರ ರಕ್ಷಣೆಗಾಗಿ ಶ್ರೀರಾಮ ಸೇನೆ ಸಹಾಯವಾಣಿಯನ್ನು ತೆರೆದಿತ್ತು. ಕೇವಲ ನಾಲ್ಕು ದಿನಗಳಲ್ಲಿ 400ಕ್ಕೂ ಹೆಚ್ಚು ಅಧಿಕ ಕರೆಗಳು ಸಹಾಯವಾಣಿಗೆ ಬಂದಿದೆ. ಈ ಬಗ್ಗೆ ಮಾತನಾಡಿರುವ ಶ್ರೀರಾಮ ಸೇನೆ ರಾಜ್ಯ ಉಪಾಧ್ಯಕ್ಷ ಗಂಗಾಧರ ಕುಲಕರ್ಣಿ , ಸಹಾಯವಾಣಿಗೆ 37 ಕರೆಗಳು ಬಂದಿವೆ. 42 ಪ್ರೋತ್ಸಾಹಕ ಕರೆಗಳಾಗಿವೆ. 52 ಲವ್ ಜಿಹಾದ್ ಸಂತ್ರಸ್ತರ ಕರೆಗಳಾಗಿವೆ. ಇವುಗಳಲ್ಲಿ ಹೊರ ರಾಜ್ಯದ ಸಂತ್ರಸ್ತರಿಂದಲೂ ಕರೆ ಬಂದಿದೆ. ಈ ನಡುವೆ ಬೆದರಿಕೆ ಕರೆಗಳು ಕೂಡ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಫೇಸ್ ಬುಕ್ ಮತ್ತು ವಾಟ್ಸಾಪ್ ನಂತಹ ಸಾಮಾಜಿಕ ಜಾಲತಾಣದಲ್ಲೂ ಸಹಾಯವಾಣಿ ಬ್ಲಾಕ್ ಮಾಡಿಸಲಾಗಿದೆ. ನಮ್ಮ ಸಹಾಯವಾಣಿ ಸರಿಯಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ವಿರೋಧಿಗಳಿಗೆ ಬೆಂಕಿ ಬಿದ್ದಿದೆ ಎಂದು ಕಿಡಿಕಾರಿದ್ದಾರೆ.