- +91 73497 60202
- [email protected]
- November 22, 2024 2:19 PM
ನ್ಯೂಸ್ ನಾಟೌಟ್ : ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಟಾಕಿ ಸಿಡಿಸಿದಕ್ಕೆ ಸಂಘ ಪರಿವಾರದ ಕಾರ್ಯಕರ್ತನಿಗೆ ಹಲ್ಲೆ ನಡೆಸಿರುವ ಆರೋಪ ಮಂಗಳೂರಿನ ಕುಂಪಲ ಕೇಸರಿನಗರ ಎಂಬಲ್ಲಿ ಬುಧವಾರ(ಜೂನ್.5) ವರದಿಯಾಗಿದೆ. ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಎಂಬವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಗೌತಮ್ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಜೂ. 4 ರಂದು ಚುನಾವಣೆ ಫಲಿತಾಂಶ ಪ್ರಕಟವಾದ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಲಾಗಿತ್ತು. ಈ ವಿಚಾರದಲ್ಲಿ ಸ್ಥಳಿಯ ಬಿಜೆಪಿ ಕಾರ್ಯಕರ್ತ (ಬಜರಂಗದಳ ಕಾರ್ಯಕರ್ತನೂ ಆಗಿರುವ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ಸಂಬಂಧ ಗುರುವಾರ ಕೆಲಸದಿಂದ ವಾಪಸ್ಸಾಗುತ್ತಿದ್ದ ಪ್ರವೀಣ್ ಪೂಜಾರಿಯನ್ನು ಅಡ್ಡಗಟ್ಟಿದ ಗೌತಮ್ ಹಲ್ಲೆ ನಡೆಸಿ ದೂಡಿ ಹಾಕಿದ್ದಾರೆ ಎನ್ನಲಾಗಿದೆ. ಪ್ರವೀಣ್ ತಲೆಗೆ ಗಾಯಗಳಾಗಿದ್ದು, ಗಾಯಾಳುವನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ