ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದಿನಿಂದ (ಜೂ. 8) ಮುಂಗಾರು ಮಳೆ ಬಿರುಸುಗೊಳ್ಳುವ ಸಾಧ್ಯತೆ ಇದೆ. ಗಾಳಿ-ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರಿನಲ್ಲಿ ಶುಕ್ರವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಮಧ್ಯಾಹ್ನವರೆಗೆ ಈ ಮಳೆ ಮುಂದುವರೆದಿತ್ತು. ಬಳಿಕ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣವಿತ್ತು. ಉಳಿದಂತೆ ಸುಳ್ಯದಲ್ಲಿ ಮಧ್ಯಾಹ್ನ ಬಳಿಕ ಧಾರಾಕಾರ ಮಳೆಯಾಗಿದೆ. ಉಳ್ಳಾಲ, ಬಂಟ್ವಾಳ, ಸುಬ್ರಹ್ಮಣ್ಯ, ಬೆಳ್ತಂಗಡಿಯಲ್ಲಿ ಸಾಧಾರಣ ಮಳೆ ಸುರಿದಿದೆ.
ಕರಾವಳಿ ಭಾಗದಲ್ಲಿ ಜೂ. 2ರಂದು ಮುಂಗಾರು ಆಗಮಿಸಿತ್ತಾದರೂ ಬಳಿಕದ ದಿನಗಳಲ್ಲಿ ಭಾರೀ ಮಳೆ ಸುರಿಯಲಿಲ್ಲ. ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.