ನ್ಯೂಸ್ ನಾಟೌಟ್ : ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ. ಪಕ್ಷ ಹಾಗೂ ಸರ್ಕಾರಗ ಘನತೆಗೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ಸಚಿವ ನಾಗೇಂದ್ರ ಸ್ವಯಂ ಪ್ರೇರಿತರಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದರು.
ಅದರಂತೆ ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ನೀಡಿದ್ದಾರೆ. ‘ನಾನು, ಗೃಹ ಸಚಿವರು ಸಚಿವ ನಾಗೇಂದ್ರ ಜತೆ ಚರ್ಚೆ ಮಾಡಿದ್ದೇವೆ. ಅವರು ಈ ಅಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ. ಆದರೆ ಪಕ್ಷದ ಹಾಗೂ ಸರ್ಕಾರದ ಘನತೆಗೆ ಧಕ್ಕೆ ಬರಬಾರದು ಎಂದು ಸ್ವತಃ ನಾಗೇಂದ್ರ ಅವರೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂದು(ಜೂ.6) ಅವರು ರಾಜೀನಾಮೆ ನೀಡಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮತದಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರ ವಜಾಕ್ಕೆ ಬಿಜೆಪಿ ಸೇರಿದಂತೆ ಇತರ ಪಕ್ಷಗಳು ಮತ್ತು ಸ್ವಪಕ್ಷೀಯರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
Click 👇