- +91 73497 60202
- [email protected]
- November 22, 2024 10:26 AM
ಮೋದಿ ಪ್ರಮಾಣವಚನಕ್ಕೆ ಮುಹೂರ್ತ ಫಿಕ್ಸ್..! ಮತ್ತೆ ಜಿಗಿದ ಷೇರು ಮಾರುಕಟ್ಟೆ..!
ನ್ಯೂಸ್ ನಾಟೌಟ್: ಎಲ್ಲವೂ ಅಂದುಕೊಂಡಂತೆ ನಡೆದರೆ ಮಿತ್ರ ಪಕ್ಷಗಳ ಬೆಂಬಲದಿಂದ ಜೂನ್ 8 ಕ್ಕೆ ಮತ್ತೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಪ್ರಧಾನಿ ಮೋದಿ ಸೇರಿದಂತೆ ಎನ್.ಡಿ.ಎ ನಾಯಕರಿಂದ ತೀರ್ಮಾನ ಆಗಿದೆ ಎನ್ನಲಾಗಿದೆ. ದೆಹಲಿಗೆ ಹಾರಿದ ಕುಮಾರಸ್ವಾಮಿ ಮಾತನಾಡಿ ನಮಗೆ ಯಾವುದೇ ಬೇಡಿಕೆಗಳಿಲ್ಲ ಎಂದಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ(Election Results 2024)ದಲ್ಲಿ ಈ ಬಾರಿ ಬಿಜೆಪಿ(BJP) ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಹಿನ್ನಡೆ ಅನುಭವಿಸುತ್ತಿದ್ದಂತೆ ನಿನ್ನೆ ಷೇರು ಮಾರುಕಟ್ಟೆ(Stock Market) ಡಿಢೀರ್ ಕುಸಿತ ಕಂಡಿತ್ತು. ಆದರೆ ಇಂದು ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ 1.95 ರಷ್ಟು ಏರಿಕೆಯಾಗಿ 73,486.14ಕ್ಕೆ ವಹಿವಾಟು ನಡೆಸುತ್ತಿದ್ದರೆ, ನಿಫ್ಟಿ 1.91 ರಷ್ಟು ಏರಿಕೆಯಾಗಿ 22,303.40 ಮಟ್ಟದಲ್ಲಿದೆ. ಕಳೆದ ಬಾರಿ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಎನ್‌ಡಿಎ ಒಕ್ಕೂಟ ಕೇವಲ 291 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಅಲ್ಲದೇ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ನಿನ್ನೆ ಫಲಿತಾಂಶ ಹೊರಬೀಳುತ್ತಿದ್ದಂತೆ ಪವರ್ ಫೈನಾನ್ಸ್ ಕಾರ್ಪೊರೇಷನ್ ಷೇರುಗಳು ಭಾರೀ ಕುಸಿತ ಕಂಡಿವೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿರುವ ಹಿನ್ನೆಲೆಯಲ್ಲಿ ಷೇರು ದರಗಳು ಕುಸಿದು ಹೂಡಿಕೆದಾರರಿಗೆ ಸುಮಾರು 40 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆ ಪಕ್ಕಾ ಆಗುತ್ತಿದ್ದಂತೆ ನಿಫ್ಟಿಯಲ್ಲಿ ONGC, M&M, BPCL, HUL, ಟಾಟಾ ಸ್ಟೀಲ್ ಸೇರಿದಂತೆ ಹಲವು ಕಂಪನಿಗಳು ಲಾಭ ಗಳಿಸಿವೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ