ನ್ಯೂಸ್ ನಾಟೌಟ್: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿ ಸಹಿ ಮಾಡಲಾಗಿದೆ. PM ಅವಾಸ್ ಯೋಜನೆಯಲ್ಲಿ ಹೆಚ್ಚುವರಿಯಾಗಿ 3 ಕೋಟಿ ಮನೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ.
ಮೊದಲ ಕ್ಯಾಬಿನೆಟ್ ಸಭೆಯಲ್ಲಿ ದೇಶದ ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲು ಸರ್ಕಾರ ಮುಂದಾಗಿದೆ ಎಂದು ವರದಿ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೋಮವಾರ(ಜೂ.10) ಸಂಜೆ ತಮ್ಮ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿದ್ದಾರೆ.
ಸಭೆಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ನೆರವು ನೀಡಲು ನಿರ್ಧರಿಸಲಾಯಿತು. ಅರ್ಹ ಕುಟುಂಬಗಳ ಸಂಖ್ಯೆಯಲ್ಲಿ ಹೆಚ್ಚಳ ಮಾಡಲಾಗಿದೆ. ಪಿಎಂ ಅವಾಸ್ ಯೋಜನೆಯಡಿ ನಿರ್ಮಾಣವಾದ ಮನೆಗೆ ಎಲ್ಲ ಸೌಲಭ್ಯ ನೀಡಲಾಗುವುದು ಎಂದು ಸರ್ಕಾರ ತಿಳಿಸಿದೆ.
Click 👇