ನ್ಯೂಸ್ ನಾಟೌಟ್: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಒಟ್ಟು 293 ಸ್ಥಾನಗಳನ್ನು ಹೊಂದಿತ್ತು. ಆದರೆ ಈಗ ಮೈತ್ರಿಕೂಟದ ಸಂಖ್ಯೆ ಎರಡೇ ದಿನದಲ್ಲಿ 303ಕ್ಕೆ ಏರಿಕೆಯಾಗಿದೆ. ಬುಧವಾರ (ಜೂ5) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹಳೆಯ ಸರ್ಕಾರ ವಿಸರ್ಜನೆ ಮಾಡಿ ರಾಷ್ಟ್ರಪತಿಗಳ ಮನವಿಗೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮೋದಿ ಮುಂದುವರಿದಿದ್ದಾರೆ.
ಇದರ ಜತೆಗೆ ಎನ್ಡಿಎ ಸಭೆ ನಡೆಸಿ ನಾಯಕರ ಸರ್ವಾನುಮತದ ಮೂಲಕ ಎನ್ಡಿಎ ನಾಯಕನಾಗಿ ಮೋದಿಯವರನ್ನು ಮತ್ತೊಮ್ಮೆ ಆಯ್ಕೆ ಮಾಡಲಾಗಿದೆ. ಇದರ ಜತೆಗೆ ಶನಿವಾರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈಗಾಗಲೇ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾದ ಪ್ರಧಾನಿ ನಿಲ್ ವಿಕ್ರಮಸಿಂಘೆ ಭಾಗವಹಿಸುವುದಾಗಿ ಫೋನ್ ಕರೆ ಮೂಲಕ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ. ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್, ಭೂತಾನ್ ಪ್ರಧಾನಿ ಕೌಂಟರ್ ಟ್ಶೆರಿಂಗ್ ಟೋಬ್ಗೇ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನಾಥ್ ಅವರಿಗೂ ಆಹ್ವಾನ ನೀಡಲಾಗಿದೆ. 7 ಮಂದಿ ಪಕ್ಷೇತರ ಸಂಸದರು, ಉಳಿದ ಸ್ಥಳೀಯ ಸಣ್ಣ ಪಕ್ಷದ ಮೂವರು ಸಂಸದರು ಎನ್ಡಿಎ ಸರ್ಕಾರವನ್ನು ಬೆಂಬಲಿಸಿದ್ದಾರೆ ಎಂದು ವರದಿ ತಿಳಿಸಿದೆ.
Click 👇