ನ್ಯೂಸ್ ನಾಟೌಟ್: ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟಾಗಿದ್ದು, ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಸ್ಥಾನಗಳು ತೀವ್ರ ಕಡಿಮೆಯಾದದ್ದಕ್ಕೆ ಹೊಣೆ ಹೊತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದು ಅಚ್ಚರಿಗೆ ಕಾರಣವಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತ ಉಪಮುಖ್ಯಮಂತ್ರಿ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದಾರೆ.
ಸರ್ಕಾರದ ಜವಬ್ದಾರಿಯಿಂದ ಬಿಡುಗಡೆಗೊಳಿಸಲು ಹೈಕಮಾಂಡ್ಗೆ ಮನವಿ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿಂಧೆ ಬಣಕ್ಕೆ ಸೋಲಾಗಿದ್ದು ಮಹಾ ವಿಕಾಸ ಅಘಾಡಿ ಮೈತ್ರಿ ಹೆಚ್ಚು ಸ್ಥಾನ ಗೆದ್ದುಕೊಂಡಿದೆ. ಒಟ್ಟು 48 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 13, ಬಿಜೆಪಿ 9, ಶಿವಸೇನೆ (ಉದ್ಧವ್ ಠಾಕ್ರೆ) 9, ಎನ್ಸಿಪಿ( ಶರಾದ್ ಪವಾರ್) 8, ಶಿಂಧೆ(ಶಿವಸೇನೆ) 7 ಸ್ಥಾನವನ್ನು ಗೆದ್ದುಕೊಂಡಿದೆ.
Click 👇