ನ್ಯೂಸ್ ನಾಟೌಟ್ : ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಗೆಲುವು ಸಾಧಿಸಿದ ಬಳಿಕ ಕ್ಷೇತ್ರದ ಜನತೆಗೆ ಧನ್ಯವಾದ ತಿಳಿಸಲು ಇಂದು(ಜೂ.7) ನಿಖಿಲ್ ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿರುವ ನಿಖಿಲ್, ನಾನು ಸಿನಿಮಾರಂಗವನ್ನ ಸಂಪೂರ್ಣವಾಗಿ ಬಂದ್ ಮಾಡಿದ್ದೀನಿ. ನನಗೆ ಪಕ್ಷ ಕಟ್ಟುವ ಜವಾಬ್ದಾರಿ ನೀಡಿದ್ದು, ಮುಂದಿನ ದಿನ ರಾಜ್ಯದಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡ್ತೀನಿ. ಮುಂದೆ ಸಂಪೂರ್ಣ ರಾಜಕಾರಣಿಯಾಗಿರ್ತಿನಿ ಎಂದಿದ್ದಾರೆ.
ಚುನಾವಣೆಯಲ್ಲಿ ತಾಂತ್ರಿಕವಾಗಿ ನಾನು ಸೋತಿರಬಹುದು, ಆದರೆ ಆ ಸೋಲು ಸೋಲಲ್ಲ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಅಪಾರ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಣ್ಣ ನಿಲ್ಲಬೇಕು ಎಂಬ ಜನರ ಅಪೇಕ್ಷೆ ಮೇರೆಗೆ ನಿಂತರು. ಎಲ್ಲಾ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ. ಇನ್ನ ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡ್ತಾರೆ. ಎಂಟು ವಿಧಾನಸಭಾ ಕ್ಷೇತ್ರದ ಜನರಿಗೆ ಕೃತಜ್ಞತೆ ಹೇಳ್ತೇನೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನವರು ಗಂಡಸ್ತನದ ಬಗೆಗೆ ಮಾತಾಡ್ತಿದ್ದರು. ಈಗ ಜನ ಉತ್ತರ ಕೊಟ್ಟಿದ್ದಾರೆ ಎಂದು ನಿಖಿಲ್ ಹೇಳಿದ್ದಾರೆ.
Click 👇