ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಮಾರುಕಟ್ಟೆ ಬಳಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ರೀತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಜೂನ್ ೯ರಂದು ಕತ್ತಲಿನ ಸಮಯದಲ್ಲಿ ಮಹಿಳೆಯನ್ನು ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿತ್ತು.
ಸೋಮವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿತ್ತು. ಮೃತ ಮಹಿಳೆ ನಳಿನಿ ಪಾಟಾಜೆ ಎಂದು ತಿಳಿದು ಬಂದಿತ್ತು. ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗುತ್ತಾರೆ. ಕಲ್ಮಡ್ಕದ ಜಯರಾಮ ಅನ್ನುವವನನ್ನು ವಶಕ್ಕೆ ತೆಗೆದುಕೊಳ್ಳುತ್ತಾರೆ. ಈ ಕೊಲೆ ಯಾಕೆ ನಡೆದಿದೆ ಅನ್ನುವುದರ ಕುರಿತು ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.