ನ್ಯೂಸ್ ನಾಟೌಟ್: ಮಾಧ್ಯಮ ಲೋಕದ ದಿಗ್ಗಜ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ (87) ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು(ಜೂ.9) ರಾಮೋಜಿ ಫಿಲಂ ಸಿಟಿಯಲ್ಲಿ ಸಕಲ ವಿಧಿ ವಿಧಾನ ಮತ್ತು ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಈ ವೇಳೆ ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟರು.
ಈ ಕಾರ್ಯದಲ್ಲಿ ಹಲವು ಪ್ರಮುಖ ನಾಯಕರು ಭಾಗವಹಿಸಿದ್ದರು.ರಾಮೋಜಿ ಅವರ ಪುತ್ರ ಕಿರಣ್ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿತು. ಸುದ್ದಿ ಮತ್ತು ಮನರಂಜನಾ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದ ರಾಮೋಜಿ ರಾವ್ ಶನಿವಾರ(ಜೂ.8) ಮುಂಜಾನೆ ಹೈದರಾಬಾದ್ನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು. ಆಂಧ್ರಪ್ರದೇಶ ಸರ್ಕಾರ ಜೂನ್ 9(ಇಂದು) ಮತ್ತು 10 ರಂದು ರಾಜ್ಯದಲ್ಲಿ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ.
Click 👇