ನ್ಯೂಸ್ ನಾಟೌಟ್: ರಾಮೋಜಿ ಫಿಲ್ಮ್ ಸಿಟಿಯನ್ನು ಕಟ್ಟಿ ಬೆಳೆಸಿದ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಹೈದರಾಬಾದ್ ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೃತದೇಹವನ್ನು ರಾಮೋಜಿ ಫಿಲ್ಮ್ ಸಿಟಿಯಲ್ಲಿರುವ ಅವರ ನಿವಾಸಕ್ಕೆ ತರಲಾಗುತ್ತದೆ. ಸಾರ್ವಜನಿಕ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ರಾಮೋಜಿ ರಾವ್ ಖ್ಯಾತ ನಿರ್ಮಾಪಕರಾಗಿದ್ದರು. ರಾಮೋಜಿ ಫಿಲ್ಮ್ ಸಿಟಿಯನ್ನು ಸ್ಥಾಪಿಸುವ ಮೂಲಕ ಚಿತ್ರ ನಿರ್ಮಾಣಕ್ಕೆ ಅವಕಾಶಕೊಟ್ಟಿದ್ದರು. ಇದೇ ಫಿಲ್ಮ್ ಸಿಟಿಯಲ್ಲಿ ಬಾಹುಬಲಿ ಸಿನಿಮಾ ಸೇರಿದಂತೆ ಹಲವಾರು ಸಿನಿಮಾಗಳು ಚಿತ್ರೀಕರಣಗೊಂಡಿದ್ದವು. ರಾಮೋಜಿ ರಾವ್ ಒಡೆತನದಲ್ಲಿ ಈನಾಡು ಪತ್ರಿಕೆ, ಈಟಿವಿ ನೆಟ್ವರ್ಕ್, ರಮಾದೇವಿ ಪಬ್ಲಿಕ್ ಸ್ಕೂಲ್, ಪ್ರಿಯಾ ಫುಡ್ಸ್, ಕಲಾಂಜಲಿ, ಉಷಾಕಿರಣ್ ಮೂವೀಸ್, ಮಯೂರಿ ಫಿಲ್ಮ್ ಡಿಸ್ಟ್ರಿಬ್ಯೂಟರ್ಸ್ ಮತ್ತು ಡಾಲ್ಫಿನ್ ಗ್ರೂಪ್ ಆಫ್ ಹೋಟೆಲ್ಗಳು ಸೇರಿವೆ. ರಾಮೋಜಿ ರಾವ್ ನಿಧನಕ್ಕೆ ಚಿತ್ರರಂಗದ ಹಿರಿಯ ನಾಯಕರು, ನಿರ್ದೇಶಕರು, ಸೇರಿದಂತೆ ರಾಜಕೀಯ ನಾಯಕರು ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
- +91 73497 60202
- [email protected]
- November 6, 2024 2:08 PM