- +91 73497 60202
- [email protected]
- November 22, 2024 12:55 AM
ನ್ಯೂಸ್ ನಾಟೌಟ್ : ನಟಿ ತಮನ್ನಾ ಭಾಟಿಯಾ (Tamanna Bhatia) ಬಗ್ಗೆ ಬೆಂಗಳೂರಿನ ಸಿಂಧಿ ಶಾಲೆಯೊಂದರಲ್ಲಿ ಪಠ್ಯ ವಿಷಯವಾಗಿ ಸೇರಿಸಲಾಗಿದೆ. ಪೋಷಕರು ಈ ಬಗ್ಗೆ ಅಕ್ಷೇಪ ವ್ಯಕ್ತಪಡಿಸಿದ್ದು, ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಇತ್ತೀಚೆಗೆ ವೆಬ್ ಸಿರೀಸ್‌ನಲ್ಲಿ ಬೋಲ್ಡ್ ದೃಶ್ಯಗಳ ಮೂಲಕ ಸುದ್ದಿಯಾಗಿದ್ದ ನಟಿ ತಮನ್ನಾ ಭಾಟಿಯಾ ಕುರಿತ ಅಧ್ಯಾಯವನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ʼಸಿಂಧಿ ಹೈಸ್ಕೂಲ್’ನಲ್ಲಿನ ಪಠ್ಯದಲ್ಲಿ ಸೇರಿಸಲಾಗಿದೆ. ಇದು ವಿವಾದಕ್ಕೆ ಕಾರಣವಾಗಿದೆ. ಸಿಂಧಿ ಮಹನೀಯರ ಕುರಿತು ಸೇರಿಸಲಾದ ಅಧ್ಯಾಯದಲ್ಲಿ ತಮನ್ನಾ ಭಾಟಿಯಾ ಕುರಿತ ವಿವರವೂ ಇದೆ. ಇದಕ್ಕೆ ಇಲ್ಲಿ ಓದುತ್ತಿರುವ ಏಳನೇ ತರಗತಿ ಮಕ್ಕಳ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಕುರಿತು ಅವರೆಲ್ಲ ದೂರು ದಾಖಲಿಸಿದ್ದಾರೆ. ಅಧ್ಯಾಯ ಸೇರ್ಪಡೆ ಕುರಿತು ಪೋಷಕರು ಶಾಲೆಯ ಆಡಳಿತ ಮಂಡಳಿಯ ಗಮನಕ್ಕೆ ತಂದಿದ್ದಾರೆ. ಆದರೆ ಶಾಲಾ ಆಡಳಿತ ಮಂಡಳಿ, ʼಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್ಮೆಂಟ್’ ಅನ್ನು ಸಂಪರ್ಕಿಸುವಂತೆ ತಿಳಿಸಿದೆ ಎನ್ನಲಾಗಿದೆ. ಸಿಂಧಿ ಸಮುದಾಯದ ಹಿರಿಯ ಕಲಾವಿದರ ಕುರಿತ ಅಧ್ಯಾಯಗಳ ಬೋಧನೆ ಬಗ್ಗೆ ಸಮಸ್ಯೆ ಇಲ್ಲ. ಆದರೆ ತಮನ್ನಾ ಭಾಟಿಯಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಿದರೆ ಅರೆಬರೆ ಬಟ್ಟೆಯ, ಅಸೂಕ್ತವಾದ ವಿಷಯ ಕಾಣಿಸುತ್ತದೆ. ಹೀಗಾಗಿ ಇವರ ಬಗ್ಗೆ ಮಕ್ಕಳಿಗೆ ಹೇಳಿ ಕೊಡುವುದು ಸೂಕ್ತ ಅಲ್ಲ ಎಂದು ಪೋಷಕರು ಆಡಳಿತ ಮಂಡಳಿಗೆ ದೂರಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ