ಕರ್ನಾಟಕದಲ್ಲಿ ಗೋಬಿ ಮಂಚೂರಿ ಬಳಿಕ ಚಿಕನ್‌ ಶವರ್ಮಾ ಬ್ಯಾನ್..? ಆಹಾರ ಇಲಾಖೆಯಿಂದ ಮಂಗಳೂರಿನಲ್ಲೂ ಶವರ್ಮಾ ಗುಣಮಟ್ಟ ಪರಿಶೀಲನೆ..!

ನ್ಯೂಸ್ ನಾಟೌಟ್ : ಗೋಬಿ ಮಂಚೂರಿ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ (Shawarma) ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ. ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಬ್ಯಾಕ್ಟೀರಿಯಾ, ಈಸ್ಟ್ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ ಎನ್ನಲಾಗಿದೆ. Click 👇