ನ್ಯೂಸ್ ನಾಟೌಟ್: ಪೊಲೀಸರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಖಡಕ್ ತನಿಖೆಯಿಂದ ಸಚಿವರೊಬ್ಬರು ಮತ್ತು ಕೆಲ ರಾಜಕಾರಣಿಗಳು ದರ್ಶನ್ ರಕ್ಷಣೆಗೆ ಯತ್ನಿಸಿದರೂ ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ನಡುವೆ ದರ್ಶನ್ ರಕ್ಷಣೆಗೆ ಮತ್ತೆ ತೆರೆಮರೆಯ ಕಸರತ್ತು ನಡೆಯುತ್ತಿದೆಯಾ ಎಂಬ ಅನುಮಾನ ಹುಟ್ಟಿಕೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್ಪಿಪಿ ಪ್ರಸನ್ನಕುಮಾರ್ Special Public Prosecutors (SPP prasanna kumar) ಖಡಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರದ ಮೇಲೆ ಒತ್ತಡ ಬಂದಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ( Siddaramaiah) ಪ್ರತಿಕ್ರಿಯಿಸಿದ್ದು, SPP ಪ್ರಸನ್ನಕುಮಾರ್ ಬದಲಾವಣೆಯ ಪ್ರಸ್ತಾಪವೇ ಆಗಿಲ್ಲ. ಈ ಬಗ್ಗೆ ನನಗೇನು ಗೊತ್ತಿಲ್ಲ. ದರ್ಶನ್ ಪ್ರಕರಣದಲ್ಲಿ ಯಾವುದೇ ಸಚಿವರು ಒತ್ತಡ ಹಾಕಿಲ್ಲ. ಯಾರೇ ಒತ್ತಡ ಹಾಕಿದರೂ ನಾನು ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ನೆಲದ ಕಾನೂನು ಏನು ಹೇಳುತ್ತದೆಯೋ ಅದರಂತೆ ತನಿಖೆಯಾಗುತ್ತದೆ. ಇದರಲ್ಲಿ ಒತ್ತಡವೋ ಇನ್ನೊಂದೋ ಈ ಯಾವುದಕ್ಕೂ ನಾನು ಗಮನ ಕೊಡುವವನಲ್ಲ. ಪೊಲೀಸರಿಗೆ ಪ್ರಕರಣದ ತನಿಖೆಯಲ್ಲಿ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Click 👇