ನ್ಯೂಸ್ ನಾಟೌಟ್: 2024-25ನೇ ಸಾಲಿನ ಶೈಕ್ಷಣಿಕ ವರ್ಷದ (Academic year) ಶಾಲಾ ಮತ್ತು ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಖುಷಿಯಿಂದಲೇ ಶೈಕ್ಷಣಿಕ ಸಂಸ್ಥೆಗಳತ್ತ ಹೆಜ್ಜೆ ಇಡುತ್ತಿದ್ದಾರೆ.
ಶಾಲಾ-ಕಾಲೇಜು ಆರಂಭದಲ್ಲಿ ದೂರದ ಊರಿನಿಂದ ಬರುವ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಬಸ್ ಪಾಸ್ ನೀಡಲಾಗುತ್ತದೆ. ಈ ಪ್ರಕ್ರಿಯೆಗೆ ಇದೀಗ ಚಾಲನೆ ದೊರೆತಿದೆ. ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಪ್ರಕಟಣೆ ಹೊರಡಿಸಿದೆ. ಮುಂದಿನ ಹತ್ತು ತಿಂಗಳ ತನಕ ನಿಗಮ ಬಸ್ ಪಾಸ್ ದರ ನಿಗದಿ ಪಡಿಸಿದೆ. ಹಾಗಾದರೆ ಆ ಪಾಸ್ ದರ ಎಷ್ಟು..? ಅರ್ಜಿ ಸಲ್ಲಿಸೋದು ಹೇಗೆ..? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
1. ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು https://sevasindhuservices.karnataka.gov.in/buspassservices
2. ಆನ್ ಲೈನ್ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿ ಮೂಲಕವೂ ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂ. ಸೇವಾ ಶುಲ್ಕವಿದೆ.
3. ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ ಪಾಸ್ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕರಾರಸಾ ನಿಗಮದ ವೆಬ್ಸೈಟ್ನಲ್ಲಿ (https://ksrtc.karnataka.gov.in/studentpass) ಡೌನ್ಲೋಡ್ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
4. ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸ್ ಪಡೆಯಬಹುದು.
5. ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್ನ ಹೆಸರು / ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್ಗಳಲ್ಲಿ ವಿತರಿಸಲಾಗುತ್ತದೆ.
6. ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹುದು.
7.ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್ ವಿಳಾಸ: https://ksrtc.karnataka.gov.in