ನ್ಯೂಸ್ ನಾಟೌಟ್: ಪರಿಸರವನ್ನು ಉಳಿಸಿ, ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ. ಪ್ರಾಕೃತಿಕ ಸಮಸ್ಯೆ ನಿವಾರಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಬುಧವಾರ (ಜೂ.5) ವಿಶ್ವ ಪರಿಸರ ದಿನ ಮತ್ತು ಸೈಕಲ್ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಸುಳ್ಯ ಹಾಗೂ ಪಂಜ ವಲಯದ ಅರಣ್ಯಾಧಿಕಾರಿ ಗಿರಿಶ್ ಆರ್. ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ) ಸುಳ್ಯ ಅಧ್ಯಕ್ಷ, ವೈದ್ಯಕೀಯ ನಿರ್ದೇಶಕ ಡಾ. ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಂದು ಮರ ಕಡಿದರೆ ಅದಕ್ಕೆ ಪ್ರತಿಯಾಗಿ ಎರಡು ಗಿಡ ನೆಡುವ ಪ್ರವೃತ್ತಿ ಬೆಳೆಸಬೇಕು. ವಾಹನದ ಬಳಕೆ ಸಾಧ್ಯವಾದಷ್ಟು ಕಡಿಮೆ ಮಾಡಿ ಎಂದು ಸಲಹೆ ನೀಡಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಲೀಲಾಧರ್ ಡಿ.ವಿ., ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಸಿ. ರಾಮಚಂದ್ರ ಭಟ್, ಇಎನ್ ಟಿ ವಿಭಾಗ ಪ್ರೊಫೆಸರ್ ಹಾಗೂ ಮುಖ್ಯಸ್ಥರು ಡಾ. ರವಿಶಂಕರ್, ಮನೋವೈದ್ಯಶಾಸ್ತ್ರ ವಿಭಾಗ ಪ್ರೊಫೆಸರ್ ಹಾಗೂ ಮುಖ್ಯಸ್ಥರು ಡಾ. ಪೂನಂ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ಫಿಸಿಯೊಥೆರಪಿ ಪ್ರಾಂಶುಪಾಲ ಸಾಯಿರಾಮ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲೆ ಪ್ರೇಮಾ ಬಿ.ಎಂ, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಪ್ರಾಂಶುಪಾಲೆ ಚಂದ್ರಾವತಿ, ಪೆಥಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಸವಿನ್ ಸಿ.ಜಿ. ಮತ್ತಿತರರು ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ಬಳಿಕ ಆಸ್ಪತ್ರೆಯ ಬಳಿ ಗಿಡ ನೆಡಲಾಯಿತು. ಡಾ.ಸಿ.ಆರ್. ಭಟ್ ಸೇರಿದಂತೆ ಇತರ ವೈದ್ಯರು ಹಾಗೂ ವಿದ್ಯಾರ್ಥಿಗಳು ಬೈಸಿಕಲ್ ತುಳಿಯುವುದರ ಮುಖಾಂತರ ಬೈಸಿಕಲ್ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮಧ್ಯೆ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ಕುರಿತಾದ ಸಾಂಸ್ಕ್ರತಿಕ ವೈವಿಧ್ಯ ನೆರವೇರಿತು. ಕಾರ್ಯಕ್ರಮ ಅಂಗವಾಗಿ ಆಯೋಜಿಸಿದ ಹಲವಾರು ಸ್ಪರ್ಧೆಗಳ ಬಹುಮಾನವನ್ನು ವಿತರಿಸಲಾಯಿತು. ಪೆಥಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸವಿನ್ ಸಿ.ಜಿ. ಸ್ವಾಗತಿಸಿದರು. ವೈದ್ಯಕೀಯ ವಿದ್ಯಾರ್ಥಿಗಳಾದ ವೈಷ್ಣವಿ ಪ್ರಾರ್ಥಿಸಿದರು. ಭ್ರಮರ ಕಾರ್ಯಕ್ರಮ ನಿರೂಪಿಸಿದರು. ವೈದ್ಯರು, ಪ್ರಾಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಪಾಲ್ಗೊಂಡಿದ್ದರು.