- +91 73497 60202
- [email protected]
- November 23, 2024 9:32 PM
ನ್ಯೂಸ್ ನಾಟೌಟ್ : ಪ್ರೇಮ ವೈಫಲ್ಯದಿಂದಾಗಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು ಪ್ರೇಮಿ ಎಂದು ವಾಟ್ಸಪ್‌ನಲ್ಲಿ ಸ್ಟೇಟಸ್ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಂತೋಷ್ (22) ನೇಣುಬಿಗಿದುಕೊಂಡು ಸಾವಿಗೆ ಶರಣಾದ ಯುವಕ ಎಂದು ವರದಿ ತಿಳಿಸಿದೆ. ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂತೋಷ್ ಅತ್ತಿಗೆ ತಂಗಿಯನ್ನು ಪ್ರೀತಿಸುತ್ತಿದ್ದ. ಮದುವೆಗೆ ಯುವತಿಯಿಂದ ಒಪ್ಪಿಗೆ ಸಿಗದಿದ್ದಾಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು, ಪ್ರಕರಣ ದಾಖಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ