ನ್ಯೂಸ್ ನಾಟೌಟ್: ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಸ್ಪಷ್ಟ ಬಹುಮತ ಪಡೆಯುವಲ್ಲಿ ಸಫಲರಾಗಲಿಲ್ಲ. ಬಿಜೆಪಿಯ ಲೆಕ್ಕಾಚಾರಗಳನ್ನು ಮೀರಿ ಕಾಂಗ್ರೆಸ್ ಪ್ರದರ್ಶನ ನೀಡಿದೆ. ಆದರೆ ಈಗ ಚುನಾವಣಾ ಪ್ರಚಾರದ ವೇಳೆ ಪಕ್ಷ ನೀಡಿದ ಭರವಸೆಯನ್ನು ಈಡೇರಿಸುವಂತೆ ಉತ್ತರ ಪ್ರದೇಶದ ಕಾಂಗ್ರೆಸ್ ಕಚೇರಿ ಎದುರು ‘ಗ್ಯಾರಂಟಿ ಕಾರ್ಡ್’ಗಳನ್ನು ಹಿಡಿದು ಅನೇಕ ಮಹಿಳೆಯರು ಸರದಿ ಸಾಲಿನಲ್ಲಿ ನಿಂತಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಬಡ ಕುಟುಂಬದ ಯಜಮಾನಿಗೆ ಪ್ರತಿ ವರ್ಷವೂ 1 ಲಕ್ಷ ರೂ ಹಣ ನೀಡಲಾಗುವುದು ಎಂದು ಭರವಸೆ ನೀಡಿ ಅನೇಕ ಮನೆಗಳಿಗೆ ಕಾಂಗ್ರೆಸ್ ‘ಗ್ಯಾರಂಟಿ ಕಾರ್ಡ್’ಗಳನ್ನು ಹಂಚಿತ್ತು. ಮಂಗಳವಾರ ಫಲಿತಾಂಶ ಪ್ರಕಟವಾದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಮುಸ್ಲಿಂ ಮಹಿಳೆಯರು ಲಖನೌದಲ್ಲಿನ ಕಾಂಗ್ರೆಸ್ ಕಚೇರಿ ಮುಂದೆ ಸರದಿ ಸಾಲಿನಲ್ಲಿ ನಿಂತು ಕಾರ್ಡ್ ಗಾಗಿ ಒತ್ತಾಯಿಸಿದ್ದಾರೆ. ಈ ವೇಳೆ ರೊಚ್ಚಿಗೆದ್ದ ಮಹಿಳೆಯರಿಂದ ಕಾಂಗ್ರೆಸ್ ಕಚೇರಿಯ ಎದುರು ಹೈಡ್ರಾಮವೇ ನಡೆದಿದ್ದು, ಬಳಿಕ ಅವರನ್ನು ಸಮಾಧಾನ ಪಡಿಸಿ ಕಳುಹಿಸಲಾಯಿತು ಎಂದು ವರದಿ ತಿಳಿಸಿದೆ.
Click 👇