- +91 73497 60202
- [email protected]
- November 21, 2024 9:57 PM
ಕೇರಳದಲ್ಲಿ ಮೆದುಳನ್ನೇ ತಿನ್ನುವ ಅಪರೂಪದ ಅಮೀಬಾ ಸೋಂಕು ಪತ್ತೆ..! ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್..!
ನ್ಯೂಸ್ ನಾಟೌಟ್: ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಕೇರಳದಲ್ಲಿ ಹೆಚ್ಚಾಗುತ್ತಿದ್ದು ಭಾರಿ ಆತಂಕ ಮೂಡಿಸಿದೆ, ಈ ಕಾರಣದಿಂದ ಕೇರಳ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲೂ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ. ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ. ಸೋಂಕು ಹರಡುವ ಆತಂಕದ ಹಿನ್ನೆಲೆ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಕಲುಷಿತ ನೀರಿನಲ್ಲಿ ಈಜಾಡದಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಭೆ ನಡೆಸಿದ್ದು ಸೋಂಕು ಹರಡದಂತೆ ತಡೆಯಲು ಕಲುಷಿತ ಜಲಮೂಲಗಳಲ್ಲಿ ಸ್ನಾನ ಮಾಡದಂತೆ ಸಲಹೆಗಳನ್ನು ನೀಡಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ