ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ..?

ನ್ಯೂಸ್ ನಾಟೌಟ್: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿಗಳಲ್ಲಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಮುಗಿಸಿದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎನ್ನಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ಸೈಟ್ ನ ಲಿಂಕ್ ಓಪನ್ ಆದ ನಂತರ, ಖಾಲಿ ಹುದ್ದೆಗಳು ಲಭ್ಯವಿರುವ ಜಿಲ್ಲೆ,ತಾಲೂಕು, ಅಧಿಸೂಚನೆ ಸಂಖ್ಯೆ, ಹುದ್ದೆಗಳ ಸಂಖ್ಯೆ ಆಯ್ಕೆ ಮಾಡಿಕೊಂಡು ಆನ್ಲೈನ್ ಅರ್ಜಿಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಅಪ್ಲಿಕೇಶನ್ ಸಲ್ಲಿಸಿದ ಬಳಿಕ ಫಾರ್ಮನ್ನು ಡೌನ್​​ಲೋಡ್ ಮಾಡಿಕೊಳ್ಳಿ. ಪ್ರಸ್ತುತ ಬೆಳಗಾವಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿ ಅಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆನ್​ಲೈನ್​​ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ. ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನೀವು ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ: https://karnemakaone.kar.nic.in/abcd/ Click 👇