ನ್ಯೂಸ್ ನಾಟೌಟ್: ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ತಾತ್ಕಾಲಿಕವಾಗಿ ವಾಹನ ಸಂಚಾರ ಬಂದ್ ಮಾಡಲಾಗಿದೆ.
ಇಂದು(ಜು.18) ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡ ಕುಸಿತದಿಂದ ಸುಮಾರು 10 ಕಿಮಿ ಟ್ರಾಫಿಕ್ ಜಾಮ್ ನಿರ್ಮಾಣವಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಂಕರ್ ಓಡಾಟಕ್ಕೆ ತಾತ್ಕಾಲಿಕ ತಡೆ ವಿಧಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಸಂಚಾರಕ್ಕೆ ಪ್ರಮುಖ ಆಧಾರವಾಗಿದ್ದ ಶಿರಾಡಿ ಘಾಟ್ ಬಂದ್ನಿಂದ ಪ್ರಯಾಣಿಕರು ಸಮಸ್ಯೆ ಅನುಭವಿಸುವಂತಾಗಿದೆ.
ಪೊಲೀಸರು ಹಾಸನದ ಕಂದಲಿ ಗ್ರಾಮದ ಬಳಿಯೇ ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದಾರೆ. ಅತ್ತ ಚಾರ್ಮಾಡಿ ಘಾಟ್ನಲ್ಲೂ ಪ್ರಯಾಣ ದುಸ್ಥರವಾದ ಹಿನ್ನೆಲೆಯಲ್ಲಿ ಹಾಸನದಲ್ಲಿಯೇ ವಾಹನ ನಿಲ್ಲಿಸಲು ಸೂಚನೆ ನೀಡಲಾಗಿದೆ. ಸಕಲೇಶಪುರದವರೆಗೆ ತೆರಳುವ ಸಾರಿಗೆ ಬಸ್ಗಳಿಗೆ ಮಾತ್ರ ತೆರಳಲು ಅವಕಾಶ ನೀಡಲಾಗಿದೆ. ಮಂಗಳೂರು ಕಡೆಗೆ ಹೋಗೊ ಬಸ್ಗಳಿಗೂ ಹಾಸನ ತಾಲ್ಲೂಕಿನ ಕಂದಲಿ ಬಳಿ ತಡೆ ಒಡ್ಡಲಾಗಿದೆ ಎಂದು ವರದಿ ತಿಳಿಸಿದೆ.
Click 👇