- +91 73497 60202
- [email protected]
- November 22, 2024 9:36 AM
ತಂತಿ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ವಿದ್ಯುತ್ ಶಾಕ್..! 19 ವರ್ಷದ ವಿದ್ಯಾರ್ಥಿ ಸಾವು..!
ನ್ಯೂಸ್ ನಾಟೌಟ್: ತಂತಿ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ವಿದ್ಯುತ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಶುಕ್ರವಾರ(ಜುಲೈ 11) ಬೆಳಗಿನಜಾವ ಯುವಕನ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ತಂತಿ ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ ಎನ್ನಲಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ. ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ