ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ನಡುವೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಮರ ಬಿದ್ದು ಸಂಚಾರ ವ್ಯತ್ಯಯವಾಗಿದೆ. ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ.
ಮರಗಳು ಬಿದ್ದು ವಾಹನ ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಬಂದ್ ಮಾಡಲಾಗಿದ್ದು ಪೊಲೀಸ್ ಗಸ್ತು ಹಾಕಲಾಗಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ಸಂಪರ್ಕಿಸುವ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಹಿನ್ನೆಲೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳು ಸಾಲು ಗಟ್ಟಿ ನಿಂತಿವೆ.
Click