ನ್ಯೂಸ್ ನಾಟೌಟ್: ಕೋಚಿಂಗ್ ಸೆಂಟರ್ನ ನೆಲಮಾಳಿಗೆಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್ (MCD) ಕ್ರಮ ಕೈಗೊಂಡಿದ್ದು, ದೆಹಲಿಯ ರಾಜೇಂದ್ರ ನಗರದಲ್ಲಿರುವ ರಾವ್ ಐಎಎಸ್ ಕೋಚಿಂಗ್ ಸೆಂಟರ್ ಅಕ್ರಮವಾಗಿ ನಡೆಸುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು.
ಅದರಂತೆ ಭಾನುವಾರ(ಜು.29) ಹಳೇ ರಾಜೇಂದ್ರ ನಗರ ಪ್ರದೇಶ ಸುತ್ತಮುತ್ತ ಕಟ್ಟಡಗಳ ನೆಲಮಾಳಿಗೆಯಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ 13 ಅಕ್ರಮ ಕೋಚಿಂಗ್ ಸೆಂಟರ್ ಗಳನ್ನು ಬಂದ್ ಮಾಡಿ ಸೀಲ್ ಮಾಡಿದೆ. ಅಷ್ಟು ಮಾತ್ರವಲ್ಲದೆ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ನೀರು ನುಗ್ಗಿ ಮೂವರು ಸಾವನ್ನಪ್ಪಿದ ಘಟನೆಯ ತನಿಖೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲು ಎಂಸಿಡಿ ನಿರ್ಧರಿಸಿದೆ ಎನ್ನಲಾಗಿದೆ.
ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, 99 ನೋಟ್ಸ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಸೇರಿದಂತೆ ‘ಈಸಿ ಫಾರ್ ಐಎಎಸ್’ ಕೋಚಿಂಗ್ ಸೆಂಟರ್ ಗೆ ಬೀಗ ಜಡಿಯಲಾಗಿದೆ. ದೆಹಲಿ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ, ಈ ಕೋಚಿಂಗ್ ಸೆಂಟರ್ಗಳನ್ನು ನೆಲಮಾಳಿಗೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಡೆಸಲಾಗುತ್ತಿದ್ದು, ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ಈ ಸಂಸ್ಥೆಗಳ ಗೇಟ್ಗಳಿಗೂ ನೋಟಿಸ್ಗಳನ್ನು ಅಂಟಿಸಲಾಗಿದೆ.
Click