ನ್ಯೂಸ್ ನಾಟೌಟ್: ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ರೀಡರ್ಸ್ ಕ್ಲಬ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ತರಬೇತಿ ಆರಂಭಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸುಳ್ಯದ ವಿದ್ಯಾಮಾತ ಅಕಾಡೆಮಿಯ ಸಂಸ್ಥಾಪಕ ಭಾಗ್ಯೇಶ್ ರೈ, ವಿದ್ಯಾರ್ಥಿಗಳ ಜೀವನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಅತೀ ಅಗತ್ಯ. ಇದರ ಅಗತ್ಯ ಮತ್ತು ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳ ಬಗ್ಗೆ ವಿವರಿಸಿದರು.
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳ ಮುಂದಿನ ಜೀವನಕ್ಕೆ ಶುಭಹಾರೈಸಿದರು.ರೀಡರ್ಸ್ ಕ್ಲಬ್ ನ ಸಂಚಾಲಕರು, ಉಪನ್ಯಾಸಕಿ ಸ್ವರ್ಣ ಕಲಾ ಎ.ಎಸ್ . ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲೆ ದಯಾಮಣಿ .ಕೆ ಶುಭ ಹಾರೈಸಿದರು ಉಪನ್ಯಾಸಕ ಬಾಲಕೃಷ್ಣ ಕೆ. ಅತಿಥಿಗಳನ್ನು ಪರಿಚಯಿಸಿದರು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಕ್ಷಿತ ಅತಿಥಿಗಳನ್ನು ಸ್ವಾಗತಿಸಿ, ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಹಿತಾಶ್ರೀ ವಂದಿಸಿದರು. ಪ್ರಥಮ ವಿಜ್ಞಾನ ವಿಭಾಗದ ಶ್ರೀವಲ್ಲಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪನ್ಯಾಸಕರು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.