ಚಿಕ್ಕಮಗಳೂರು ಪ್ರವಾಸವನ್ನು15 ದಿನ ಮುಂದೂಡುವಂತೆ ಜಿಲ್ಲಾಡಳಿತ ಮನವಿ..! ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಜೊತೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ..!

ನ್ಯೂಸ್ ನಾಟೌಟ್: ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರ ವರೆಗೂ ಪ್ರವಾಸಕ್ಕೆ ಬಾರದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಪ್ರವಾಸಿ ತಾಣಗಳಲ್ಲಿ ಗುಡ್ಡ, ರಸ್ತೆಗಳು ಕುಸಿತವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸ ಬರುವುದನ್ನು ಮುಂದೂಡುವಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮನವಿ ಮಾಡಿದ್ದಾರೆ. ಇದರ ಜೊತೆ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ (Red Alert), ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಜಾರಿಯಾಗಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌ ಜಾರಿಯಾಗಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Click