ನ್ಯೂಸ್ ನಾಟೌಟ್: ದ.ಕ. ಜಿಲ್ಲೆಯಾದ್ಯಂತ ಮತ್ತೆ ಮಳೆ ಅಬ್ಬರ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.19ರಂದು (ಶುಕ್ರವಾರ) ರಜೆ ಘೋಷಿಸಲಾಗಿದೆ. ಪುತ್ತೂರು, ಸುಳ್ಯ,ಬಂಟ್ವಾಳ, ಕಡಬ, ಬೆಳ್ತಂಗಡಿ ಭಾಗದ ಶಾಲಾ ಕಾಲೇಜಿಗೆ ಅನ್ವಯವಾಗುವಂತೆ ಈ ಆದೇಶ ವನ್ನು ಜಿಲ್ಲಾಧಿಕಾರಿ ಹೊರಡಿಸಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ ತಾಲೂಕಿಗೆ ರಜೆ ಇರುವುದಿಲ್ಲ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹೆಚ್ಚು ಮಳೆ ಇರುವ ಜಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ಕಳೆದ ನಾಲ್ಕು ದಿನಗಳಿಂದ ಜಿಲ್ಲಾಡಳಿತ ಶಾಲಾ- ಕಾಲೇಜುಗಳಿಗೆ ರಜೆ ನೀಡುತ್ತಿದೆ.