ನಟ ದರ್ಶನ್‌, ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಮತ್ತೆ 14 ದಿನ ಜೈಲು..! ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರೋಪಿಗಳು ಕೋರ್ಟ್ ಗೆ ಹಾಜರು..!

ನ್ಯೂಸ್ ನಾಟೌಟ್: ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳಾದ ನಟ ದರ್ಶನ್‌ (Darshan Thoogudeepa), ಗೆಳತಿ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಇಂದು(ಜುಲೈ 4) ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ವಿಧಿಸಿದ್ದ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಜುಲೈ 4 ಕ್ಕೆ ಮುಕ್ತಾಯವಾಗಿತ್ತು. ಈ ಹಿನ್ನೆಲೆ ಬೆಂಗಳೂರಿನ ಕೋರ್ಟ್‌ನಲ್ಲಿ ಗುರುವಾರ ಕೇಸ್‌ ವಿಚಾರಣೆ ನಡೆಸಿದ್ದು, ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಣೆ ಮಾಡಲಾಗಿದೆ. ಅಂದರೆ, ಜುಲೈ 18 ವರೆಗೂ ನಟ ಸೇರಿದಂತೆ ಎಲ್ಲಾ ಆರೋಪಿಗಳು ಜೈಲಿನಲ್ಲಿರಬೇಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳ ಪೈಕಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ 13 ಆರೋಪಿಗಳು ಬೆಂಗಳೂರಿನ ಸೆಂಟ್ರಲ್‌ ಜೈಲಿನಲ್ಲಿ ಇದ್ದಾರೆ. ಉಳಿದ 4 ಆರೋಪಿಗಳು ತುಮಕೂರಿನ ಜೈಲಿನಲ್ಲಿ ಇದ್ದಾರೆ. ವಿಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯಕ್ಕೆ ಅವರನ್ನು ಹಾಜರು ಪಡಿಸಲಾಗಿತ್ತು. ಬಳಿಕ ತನಿಖೆ ನಡೆಯುತ್ತಿರುವುದರಿಂದ ಮತ್ತಷ್ಟು ದಿನ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಮನವಿ ಮಾಡಿದ್ದರು ಅದಕ್ಕೆ ನ್ಯಾಯಾಲಯ ಅನುಮತಿ ನೀಡಿದೆ. Click 👇