ನ್ಯೂಸ್ ನಾಟೌಟ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಗುರುವಾರ(july 18) ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಬಿಬಿಎಂಪಿ, ಆ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ ಎನ್ನಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್ಗಳಿಗೆ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.
ಅಲ್ಲದೇ ಮಕ್ಕಳಿಗೆ ಜಾಗೃತಿ ಮೂಡಿಸುವ ವಿಡಿಯೋ ಮಾಡಲು ಉತ್ತೇಜಿಸೋ ಶಿಕ್ಷಕಿಯರಿಗೂ 35 ಸಾವಿರ ರೂಪಾಯಿ ಬಹುಮಾನದ ಆಫರ್ ಘೋಷಿಸಿದೆ. ಇತ್ತ ಬಿಬಿಎಂಪಿಯ ಈ ರೀಲ್ಸ್ ಕಾಂಪಿಟೇಷನ್ಗೆ ಸಾರ್ವಜನಿಕರಿಂದ ವಿರೋಧ ಕೂಡ ವ್ಯಕ್ತವಾಗುತ್ತಿದ್ದು, ಪಾಲಿಕೆ ಡೆಂಗ್ಯೂ ಬಗ್ಗೆ ಅರಿವು ಮೂಡಿಸಲು ಹೊರಟಿರೋದೇನೋ ಸರಿ. ಆದ್ರೆ ನಗರದಲ್ಲಿ ಸರಿಯಾಗಿ ಸ್ವಚ್ಛತೆ ಕಾಪಾಡಬೇಕು, ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಮಕ್ಕಳಿಗೆ ಈ ರೀತಿ ರೀಲ್ಸ್ ಮಾಡಿಸುತ್ತಿರುವುದರಿಂದ ಏನೂ ಪ್ರಯೋಜನ ಇಲ್ಲ ಎಂಬ ಅಭಿಪ್ರಾಯಗಳು ವ್ಯಕ್ತವಾಗಿದೆ.
Click 👇