ಡೆಂಗ್ಯೂ ಬಗ್ಗೆ ರೀಲ್ಸ್ ಮಾಡಿದ್ರೆ 1 ಲಕ್ಷ ರೂಪಾಯಿ ಬಹುಮಾನ..! ಏನಿದು ಹೊಸ ಅಭಿಯಾನ..? ನೀವು ಭಾಗವಹಿಸ್ಬಹುದಾ..?

ನ್ಯೂಸ್ ನಾಟೌಟ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಗುರುವಾರ(july 18) ಒಂದೇ ದಿನ ನಗರದಲ್ಲಿ 524 ಪ್ರಕರಣಗಳು ವರದಿಯಾಗಿವೆ. ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುವ ರೀಲ್ಸ್ ಮಾಡಿದವರಿಗೆ ಬಂಪರ್ ಬಹುಮಾನ ಘೋಷಿಸಿರುವ ಬಿಬಿಎಂಪಿ, ಆ ಮೂಲಕ ಜಾಗೃತಿ ಮೂಡಿಸಲು ಹೊರಟಿದೆ ಎನ್ನಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಡೆಂಗ್ಯೂ ಕುರಿತ ರೀಲ್ಸ್​ಗಳನ್ನು ಆಹ್ವಾನಿಸಿರುವ ಪಾಲಿಕೆ, ಮೊದಲ ಐದು ಉತ್ತಮ ರೀಲ್ಸ್​ಗಳಿಗೆ ತಲಾ 25 ಸಾವಿರ ರೂಪಾಯಿ ಬಹುಮಾನ ಘೋಷಿಸಿದೆ. ಇನ್ನು ದ್ವೀತಿಯ ಬಹುಮಾನದಲ್ಲಿ ಐದು ಜನರಿಗೆ ತಲಾ 10 ಸಾವಿರ ರೂಪಾಯಿ ನಿಗದಿ ಮಾಡಿದ್ದು, ಯಾವ ಶಾಲೆ ಹೆಚ್ಚು ವಿದ್ಯಾರ್ಥಿಗಳ ಬಳಿ ರೀಲ್ಸ್ ಮಾಡಿಸುತ್ತದೆಯೋ ಆ ಶಾಲೆಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.