- +91 73497 60202
- [email protected]
- November 23, 2024 1:55 AM
ನ್ಯೂಸ್ ನಾಟೌಟ್: ಪೆನ್ಸಿಲ್ವೇನಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಭಾಷಣ ಮಾಡುತ್ತಿದ್ದಾಗ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಮೇಲೆ ಇಂದು(ಜುಲೈ.14) ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಟ್ರಂಪ್ ಸ್ವಲ್ಪದರಲ್ಲೇ ಪಾರಾಗಿದ್ದು, ಕಿವಿಗೆ ಗಾಯವಾಗಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಸ್ಥಳವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ತಿಂಗಳುಗಳ ಮೊದಲೇ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಟ್ರಂಪ್ ಕಿವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ