- +91 73497 60202
- [email protected]
- November 22, 2024 11:44 AM
ನ್ಯೂಸ್ ನಾಟೌಟ್: ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಹಬ್ಬ ಸಮೀಪಿಸುತ್ತಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಸುತ್ತೋಲೆಯಿಂದ ಮತ್ತೆ ವಿವಾದ ಸೃಷ್ಟಿಯಾಗಿದೆ. ಶಾಲೆಗಳ ಮೈದಾನಗಳನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸದಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಮಹತ್ವದ ಸುತ್ತೋಲೆ ಹೊರಡಿಸಿದ್ದಾರೆ. ಶಾಲಾ ಮೈದಾನಗಳಲ್ಲಿ ನಡೆಯುತ್ತಿದ್ದ ಗಣೇಶೋತ್ಸವ, ಕೃಷ್ಣ ಜನ್ಮಾಷ್ಟಮಿ ಮುಂತಾದ ಹಬ್ಬಗಳಿಗೆ ಅಡಚಣೆಯಾಗುವ ಸಾಧ್ಯತೆಗಳಿವೆ. ಹಬ್ಬಗಳು ಹತ್ತಿರ ಬಂದಾಗಲೇ ಇಂತಹಾ ಸುತ್ತೋಲೆ ಹೊರಡಿಸಿದ್ದಕ್ಕೆ ಹಲವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶೈಕ್ಷಣಿಕೇತರ ಚಟುವಟಿಕೆಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದ ಶಾಲಾ ಮುಖ್ಯಸ್ತರೇ ಹೊಣೆಗಾರರಾಗುತ್ತಾರೆಂದು ದಕ್ಷಿಣ ಕನ್ನಡ ಡಿಡಿಪಿಐ ಎಚ್ಚರಿಕೆ ನೀಡಿದ್ದಾರೆ. ಶಾಲಾ ಮೈದಾನ, ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ-ಉದ್ದೇಶಗಳಿಗೆ ಬಳಸಬಾರದು ಎಂದು ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಅನುಮತಿಗಾಗಿ ಶಿಕ್ಷಣ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸಬಾರದು ಎಂದು ಖಡಕ್ ಸೂಚನೆ ಸಹ ನೀಡಿದೆ. ಗಣೇಶೋತ್ಸವ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಮೀಪಿಸುತ್ತಿದ್ದಂತೆಯೇ ಈ ಸುತ್ತೋಲೆ ಹೊರಡಿಸಿರುವುದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ