- +91 73497 60202
- [email protected]
- November 22, 2024 2:04 AM
ಬೆಂಗಳೂರಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಎಫ್.ಐ.ಆರ್ ದಾಖಲು..! ಇಲ್ಲಿದೆ ಸಂಪೂರ್ಣ ಮಾಹಿತಿ
ನ್ಯೂಸ್ ನಾಟೌಟ್: ಹಕ್ಕುಸ್ವಾಮ್ಯ (ಕಾಪಿರೈಟ್) ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ ಎನ್ನಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ನವೀನ್ ಕುಮಾರ್ ಎಂಬವರು ರಕ್ಷಿತ್ ಶೆಟ್ಟಿ ವಿರುದ್ದ ದೂರು ದಾಖಲು ಮಾಡಿದ್ದಾರೆ. ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. 2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು ಎಂದು ದೂರುದಾರರು ಆರೋಪಿಸಿದ್ದಾರೆ. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲಾಗಿದೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ