ನ್ಯೂಸ್ ನಾಟೌಟ್: ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ರನ್ನು ಆಯ್ಕೆ ಮಾಡುವ ಮೂಲಕ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ಹಾರ್ದಿಕ್ ಪಾಂಡ್ಯಗೆ ಬಿಗ್ ಶಾಕ್ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಈ ಆಘಾತದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಲು ಭಾರತ ತಂಡದ ಮುಖ್ಯ ಕೋಚ್ ನಿರ್ಧರಿಸಿದ್ದಾರೆ. ಅದೇನೆಂದರೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಹಾರ್ದಿಕ್ ಪಾಂಡ್ಯ ಆಯ್ಕೆಯಾಗಬೇಕಿದ್ದರೆ ತಮ್ಮ ಬೌಲಿಂಗ್ ಸಾಮರ್ಥ್ಯವನ್ನು ತೆರೆದಿಡಬೇಕು. ಆದರೆ ಅದು ಟೀಮ್ ಇಂಡಿಯಾ ಪರ ಕಣಕ್ಕಿಳಿದಲ್ಲ. ಬದಲಾಗಿ ಡಿಸೆಂಬರ್ನಲ್ಲಿ ನಡೆಯಲಿರುವ ವಿಜಯ ಹಝಾರೆ ಟೂರ್ನಿಯ ಮೂಲಕ ಎಂದು ತಿಳಿಸಲಾಗಿದೆ. ಇತ್ತೀಚೆಗೆ ಅಧಿಕೃತವಾಗಿ ವಿಚ್ಛೇದನ ಘೋಷಿಸಿದ್ದ ಹಾರ್ದಿಕ್ ಗೆ ಮತ್ತೆ ಮತ್ತೆ ಶಾಕ್ ಗಳು ಎದುರಾಗುತ್ತಿದೆ.
ಇಲ್ಲಿ ಹಾರ್ದಿಕ್ ಪಾಂಡ್ಯ ಭಾರತ ಏಕದಿನ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ವಿಜಯ ಹಝಾರೆ ಟೂರ್ನಿಯ ಪಂದ್ಯಗಳಲ್ಲಿ ಸಂಪೂರ್ಣ 10 ಓವರ್ಗಳನ್ನು ಬೌಲಿಂಗ್ ಮಾಡಬೇಕು. ಅಂದರೆ ಮಾತ್ರ ಅವರನ್ನು ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಕಳೆದ ಏಕದಿನ ವಿಶ್ವಕಪ್ನಲ್ಲಿ ಹಾರ್ದಿಕ್ ಪಾಂಡ್ಯ ಸಂಪೂರ್ಣ 10 ಓವರ್ಗಳನ್ನು ಎಸೆಯಲು ವಿಫಲರಾಗಿದ್ದರು. ಅದರಲ್ಲೂ ಬೌಲಿಂಗ್ ಮಾಡುವ ವೇಳೆಯೇ ಅವರು ಗಾಯಗೊಂಡು ಅರ್ಧದಲ್ಲೇ ಟೂರ್ನಿಯಿಂದ ಹೊರ ನಡೆದಿದ್ದರು. ಅಷ್ಟೇ ಅಲ್ಲದೆ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಿಂದ ಕೂಡ ಹಾರ್ದಿಕ್ ವೈಯುಕ್ತಿಕ ಕಾರಣಗಳನ್ನು ನೀಡಿ ಹೊರಗುಳಿದಿದ್ದಾರೆ. ಹೀಗಾಗಿ ಅವರ ಬೌಲಿಂಗ್ ಸಾಮರ್ಥ್ಯದ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಹೀಗಾಗಿ ದೇಶೀಯ ಟೂರ್ನಿಯ ಮೂಲಕ ಭಾರತ ಏಕದಿನ ತಂಡಕ್ಕೆ ಕಂಬ್ಯಾಕ್ ಮಾಡುವಂತೆ ಹಾರ್ದಿಕ್ ಪಾಂಡ್ಯಗೆ ತಿಳಿಸಲಾಗಿದೆ.
Click 👇