ನ್ಯೂಸ್ ನಾಟೌಟ್: ಕೆವಿಜಿ ಮೆಡಿಕಲ್ ಕಾಲೇಜು ಸುಳ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಂಟಿ ಆಶ್ರಯ ಹಾಗೂ ಇತರ ಹಲವು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸವಣೂರಲ್ಲಿ ಜುಲೈ 21ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆ ಕಡಬ ಅಧ್ಯಕ್ಷ ಹಾಗೂ ವಕೀಲ ಮಹೇಶ್ ಕೆ. ಸವಣೂರು ವಹಿಸಿದ್ದರು. ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಡಾ| ಗೀತಾ ದೊಪ್ಪ ದೀಪ ಬೆಳಗುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ. ಧ. ಗ್ರಾ. ಯೋ ಬಿ ಸಿ ಟ್ರಸ್ಟ್(ರಿ) ಕಡಬ ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ನಿ.ಸವಣೂರು ಅಧ್ಯಕ್ಷ ತಾರಾನಾಥ ಕಾಯರ್ಗ, ಸಮರ್ಥ ಜನಸೇವಾ ಟ್ರಸ್ಟ್(ರಿ) ಪುಣ್ಚಪ್ಪಾಡಿ ಅಧ್ಯಕ್ಷ ಗಿರಿಶಂಕರ ಸುಲಾಯ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ.ಸವಣೂರು ಇದರ ಉಪಾಧ್ಯಕ್ಷ ಚೇತನ್ ಕೊಡಿಬೈಲು, ಸವಣೂರು ಯುವಕ ಮಂಡಲ (ರಿ) ಅಧ್ಯಕ್ಷ ಜೀತಾಕ್ಷ ಜಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಸವಣೂರು ಅಧ್ಯಕ್ಷ ಗೋಪಾಲಕೃಷ್ಣ ಗೌಡ ಆರೇಲ್ತಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶಿಬಿರದಲ್ಲಿ ಹಲವಾರು ಮಂದಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು ಹಾಗೂ ಲಭ್ಯವಿರುವ ಔಷಧಿಗಳನ್ನು ಉಚಿತವಾಗಿ ವಿತರಿಸಲಾಯಿತು.