- +91 73497 60202
- [email protected]
- November 22, 2024 4:11 PM
ರಾತ್ರಿ ಉಗ್ರರು ಮತ್ತು ಸೇನೆಯ ನಡುವೆ ಅರಣ್ಯದಲ್ಲಿ ಗುಂಡಿನ ಚಕಮಕಿ..! ಸೇನಾಧಿಕಾರಿ ಸೇರಿ 4 ಯೋಧರು ಹುತಾತ್ಮ..!
ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾದ ಬಗ್ಗೆ ಮಂಗಳವಾರ(ಜುಲೈ.16) ವರದಿಯಾಗಿದೆ. ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ (ಜೆಕೆ ಪೊಲೀಸ್) ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿ ಎಂಬಲ್ಲಿ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ನಡೆದಿದೆ. ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಕೌಂಟರ್ ನಡೆಯುತ್ತಿರುವ ಪ್ರದೇಶಕ್ಕೆ ಹೆಚ್ಚುವರಿ ಯೋಧರನ್ನು ರವಾನಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ವಕ್ತಾರರು ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಭಯೋತ್ಪಾದಕರ ಅಡಗುತಾಣದಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ