ನ್ಯೂಸ್ ನಾಟೌಟ್: ಸರ್ಕಾರಿ ಶಾಲೆಯಲ್ಲಿ RSS ಗುರುಪೂಜೆ ನಡೆಸಿರುವ ಆರೋಪವೊಂದು ಇದೀಗ ಶಿಕ್ಷಣ ಇಲಾಖೆ ತನಕ ತಲುಪಿ ರಾದ್ದಾಂತಕ್ಕೆ ಕಾರಣವಾಗಿದೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ಕರಿಂಬಿಲ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುಪೂಜೆ ನಡೆದ ಆರೋಪ ಕೇಳಿ ಬಂದಿದೆ.
ಶಾಲಾ ಕೊಠಡಿಯೊಳಗೆ ಕಾರ್ಯಕ್ರಮ ನಡೆದಿದೆ ಎನ್ನುವುದಕ್ಕೆ ಸಾಕ್ಷಿಯಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಫೋಟೋವನ್ನು ತಮ್ಮ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರಿಂದ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಶಿಕ್ಷಣೆ ಇಲಾಖೆ ಇದೀಗ ಕಾರಣ ಕೇಳಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಸರ್ಕಾರಿ ಶಾಲೆ ಅಥವಾ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಅನ್ನುವ ಸುತ್ತೋಲೆ ಸರ್ಕಾರದಿಂದ ಇದ್ದರೂ ಆರ್ ಎಸ್ ಎಸ್ ಕಾರ್ಯಕ್ರಮ ನಡೆದಿರುವುದಕ್ಕೆ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿತ್ತು.