- +91 73497 60202
- [email protected]
- November 23, 2024 1:56 AM
ನ್ಯೂಸ್ ನಾಟೌಟ್: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್ ದರ (Ticket Price) ಏರಿಸದೇ ಇದ್ದರೆ ಕೆ.ಎಸ್.ಆರ್.ಟಿ.ಸಿ (KSRTC) ಸಂಸ್ಥೆ ಉಳಿಯುವುದಿಲ್ಲ ಎಂದು ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿಕೆ ನೀಡಿದ್ದಾರೆ. ಸದ್ಯದಲ್ಲೇ ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ. ಟಿಕೆಟ್ ದರ ಹೆಚ್ಚಳ ಮಾಡುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಎನ್ನುವ ಪ್ರಶ್ನೆಯೇ ಇಲ್ಲ. ಶಕ್ತಿ ಯೋಜನೆಯಲ್ಲಿನ ಮಹಿಳಾ ಪ್ರಯಾಣಿಕರ ಟಿಕೆಟ್ ದರ ಕೂಡ ಹೆಚ್ಚಾಗಲಿದ್ದು ಅದನ್ನು ಸರ್ಕಾರ ಭರಿಸುತ್ತದೆ ಎಂದು ತಿಳಿಸಿದರು. ತೈಲ ಬೆಲೆ ಏರಿಕೆ, ಹೊಸ ಬಸ್ ಗಳ ಖರೀದಿ ಮುಂತಾದ ಖರ್ಚುಗಳಿಂದ ಸಂಸ್ಥೆಗೆ ಹೊರೆಯಾಗಿದೆ. ಅಲ್ಲದೇ ಈ ಬಾರಿ ಸಾರಿಗೆ ಸಂಸ್ಥೆಯ ನೌಕರರ ವೇತನ ಪರಿಷ್ಕರಣೆ ಮಾಡಲಿದ್ದೇವೆ. ಬಿಡಿ ಭಾಗಗಳ ದರ ಏರಿಕೆಯಾಗಿದೆ. ಈ ಎಲ್ಲಾ ಕಾರಣಗಳಿಂದ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ಶಾಸಕ ತಿಳಿಸಿದ್ದಾರೆ. ಕಳೆದ ತ್ರೈಮಾಸಿಕದಲ್ಲಿ ನಿಗಮಕ್ಕೆ 295 ಕೋಟಿ ರೂ. ನಷ್ಟವಾಗಿದೆ. ಪ್ರತಿ ಬಾರಿಯೂ ನಷ್ಟವನ್ನು ಸರಿದೂಗಿಸಿಕೊಡುವಂತೆ ಸರ್ಕಾರವನ್ನು ಕೇಳುವುದು ಸರಿಯಲ್ಲ. ನಷ್ಟವನ್ನು ಸರಿದೂಗಿಸಲು ಹಾಗೂ ಸಂಸ್ಥೆಯನ್ನು ಉಳಿಸಬೇಕಾದರೆ ಟಿಕೆಟ್ ದರ ಹೆಚ್ಚಿಗೆ ಮಾಡಲೇಬೇಕು ಎಂದು ಹೇಳಿದ್ದಾರೆ. Click 👇
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ