- +91 73497 60202
- [email protected]
- November 22, 2024 3:08 PM
ಪ್ರಿಯತಮೆಯ ಮನೆ ಮುಂದೆ ಪೊಲೀಸ್ ಕಾನ್‌ಸ್ಟೇಬಲ್ ನ ಪತ್ನಿಯಿಂದ ಪ್ರತಿಭಟನೆ..! ಏನಿದು ಪೊಲೀಸಪ್ಪನ ಪೋಲಿಯಾಟ..?
ನ್ಯೂಸ್ ನಾಟೌಟ್: ಪತಿ ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಪೊಲೀಸ್ ಕಾನ್‌ಸ್ಟೇಬಲ್ ನ ಪತ್ನಿಯು ಆತನ ಪ್ರಿಯತಮೆ ಮನೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. 2003ರಲ್ಲಿ ಹರಪನಹಳ್ಳಿ ತಾಲೂಕಿನ ಎರಡತ್ತೇನಹಳ್ಳಿ ಗ್ರಾಮದ ಪೊಲೀಸ್ ಕಾನ್‌ಸ್ಟೇಬಲ್ ಗೋಣಪ್ಪ ಎಂಬುವವನೊಂದಿಗೆ ಸೌಮ್ಯಳ ಮದುವೆಯಾಗಿತ್ತು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಇದೀಗ ಗೋಣಪ್ಪ ಗೀತಾ ಎಂಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆ ಎಂದು ಆರೋಪಿಸಿ ದಾವಣಗೆರೆಯ ರಾಮನಗರದಲ್ಲಿರುವ ಗೀತಾ ಎಂಬವರ ಮನೆಯ ಮುಂದೆ ಪೊಲೀಸ್ ಪೇದೆಯ ಪತ್ನಿ ಸೌಮ್ಯ ಮಕ್ಕಳೊಂದಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಗೋಣಪ್ಪ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಮನೆಗೆ ಬರುತ್ತಿಲ್ಲ ಎಂದು ಸೌಮ್ಯ ಆರೋಪಿಸಿದ್ದಾರೆ. ಗೋಣಪ್ಪ ಪ್ರಸ್ತುತ ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಅಸ್ತಮದಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಹಣ ಇಲ್ಲದಂತಾಗಿದೆ ಎಂದು ಸೌಮ್ಯ ಹೇಳಿಕೊಂಡಿದ್ದಾರೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ