ನ್ಯೂಸ್ ನಾಟೌಟ್: ಕೆಲವು ಸಲ ಸರ್ಕಾರ ಮಾಡುವ ನಾನ್ಸೆನ್ಸ್ ಕೆಲಸಕ್ಕೆ ನಗಬೇಕೋ ಅಳಬೇಕೋ ಗೊತ್ತಾಗಲ್ಲ. ಇಲ್ಲೊಂದು ಕಡೆ 6 ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನೇ ವರ್ಗಾವಣೆ ಮಾಡಿ ಇದೀಗ ಅಪಹಾಸ್ಯಕ್ಕೆ ಗುರಿಯಾಗಿದೆ.
ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಎಂಬವರನ್ನು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಟ್ರಾನ್ಸ್ ಫರ್ ಮಾಡಿದೆ. ವಾಸ್ತವವಾಗಿ, ಅವರು ಜನವರಿಯಲ್ಲೇ ಮೃತಪಟ್ಟಿದ್ದಾರೆ.
ಜು.9ರಂದು ಕೊಡಗಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆ ಇಂಜಿನೀಯರ್ ಜನವರಿ 12ರಂದು ಮೃತಪಟ್ಟಿದ್ದರು. ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಆರ್ಡರ್ ಹೊರಡಿಸಲಾಗಿದೆ.
ಆರು ತಿಂಗಳ ಹಿಂದೆಯೇ ಮೃತಪಟ್ಟಿಟ್ಟಿರುವ ವಿಚಾರ ರಾಜ್ಯ ಸರ್ಕಾರಕ್ಕೆ ಮಾಹಿತಿಯೇ ಇಲ್ಲದಿರುವುದು ಇಲಾಖೆಗೆ ಭಾರಿ ಮುಜುಗರ ತಂದಿದೆ. ಹಾಗಿದ್ದರೆ ಈ ಆರು ತಿಂಗಳು ಸಂಬಳವೂ ಅವರ ಖಾತೆಗೆ ಜಮೆ ಆಗುತ್ತಿತ್ತೇ? ಎಂಬ ಪ್ರಶ್ನೆಗೆ ಮಾತ್ರ ಉತ್ತರ ಸಿಕ್ಕಿಲ್ಲ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಸಂಭವಿಸಿರುವ ಈ ಎಡವಟ್ಟು ಇಲಾಖೆಗೂ ಸಚಿವರಿಗೂ ಮುಜುಗರ ತಂದಿದೆ.