ನ್ಯೂಸ್ ನಾಟೌಟ್: ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಟೆಕ್ಕಿಯೊಬ್ಬರು (Techie) ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ (Bengaluru) ಗಂಗಮ್ಮನ ಗುಡಿ ಎಂಬಲ್ಲಿ ನಡೆದಿದೆ. ಪೂಜಾ(22) ಆತ್ಮಹತ್ಯೆ ಶರಣಾದ ಮಹಿಳೆ ಎಂದು ವರದಿ ತಿಳಿಸಿದೆ.
ಪೂಜಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆ ಸುನೀಲ್ ಎಂಬಾತನನ್ನು ಪೂಜಾ ಮದುವೆಯಾಗಿದ್ದರು. ಮದುವೆಯಾದ ಬಳಿಕ ವರದಕ್ಷಿಣೆಗಾಗಿ ಪತಿ ಪೀಡಿಸುತ್ತಿದ್ದ ಎನ್ನಲಾಗಿದೆ. ‘ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ’ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Click 👇