ರಾಜ್ಯದ 8 ರೈಲುಗಳು 2 ದಿನಗಳ ಕಾಲ ಸ್ಥಗಿತ..! ಪ್ರಯಾಣಿಕರೇ ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ನಿಟ್ಟೂರು ಮತ್ತು ಸಂಪಿಗೆ ರೋಡ್ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್-64ರ ರಸ್ತೆ ಕೆಳಸೇತುವೆಗೆ ತಾತ್ಕಾಲಿಕ ಗರ್ಡರ್​ಗಳನ್ನು ಅಳವಡಿಸುವ ಮತ್ತು ತೆಗೆದುಹಾಕಲು ಅಗತ್ಯ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಸಲುವಾಗಿ, ರಾಜ್ಯದ ಹಲವು ರೈಲುಗಳನ್ನು, ಭಾಗಶಃ ರದ್ದು, ಮಾರ್ಗ ಬದಲಾವಣೆ,(Railway) ನಿಯಂತ್ರಣ ಮತ್ತು ಸಮಯ ಮರುನಿಗದಿ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ. 8 ರೈಲುಗಳ ಸಂಚಾರ ರದ್ದು ಈ ಕೆಳಗಿನ ರೈಲುಗಳ ಸಂಚಾರ ಆಗಸ್ಟ್​​ 8 ಮತ್ತು 15 ರಂದು ತಾತ್ಕಾಲಿಕವಾಗಿ 2 ದಿನ ಸ್ಥಗಿತವಾಗಲಿದೆ. ರೈಲು ಸಂಖ್ಯೆ 07346 ತುಮಕೂರು-ಚಾಮರಾಜನಗರ ಡೈಲಿ ಪ್ಯಾಸೆಂಜರ್ ಸ್ಪೆಷಲ್. ರೈಲು ಸಂಖ್ಯೆ 07328 ಚಾಮರಾಜನಗರ-ಮೈಸೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್. ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್. ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್. ರೈಲು ಸಂಖ್ಯೆ, 06576 ತಮಕೂರು-ಕೆಎಸ್‌ಆರ್ ಬೆಂಗಳೂರು ಮೆಮು ಸ್ಪೆಷಲ್. ರೈಲು ಸಂಖ್ಯೆ 06575 KSR ಬೆಂಗಳೂರು-ತುಮಕೂರು ಮೆಮು ಸ್ಪೆಷಲ್ ರೈಲು ಸಂಖ್ಯೆ 16579 ಯಶವಂತಪುರ-ಶಿವಮೊಗ್ಗ ಟೌನ್ ಇಂಟರ್‌ಸಿಟಿ ಡೈಲಿ ಎಕ್ಸ್ಪ್ರೆಸ್. ರೈಲು ಸಂಖ್ಯೆ 16580 ಶಿವಮೊಗ್ಗ ಟೌನ್-ಯಶವಂತಪುರ ಇಂಟರ್‌ಸಿಟಿ ಡೈಲಿ ಎಕ್ಸ್‌ಪ್ರೆಸ್. ಬೆಂಗಳೂರಿನಿಂದ ಧಾರವಾಡ, ಚಾಮರಾಜನಗರ, ತುಮಕೂರು, ಮೈಸೂರು, ಶಿವಮೊಗ್ಗಕ್ಕೆ ಹೊರಡುವ ರೈಲುಗಳು ಈ ಎರಡು ದಿನ ರದ್ದು, ಭಾಗಶಃ ರದ್ದಾಗಲಿವೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.