ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆ ಯತ್ನ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಈ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಚಾರ್ಜ್ ಶೀಟ್ನಲ್ಲಿ ಸಲ್ಮಾನ್ ಖಾನ್ ಹತ್ಯೆಗೆ ನಡೆಸಲಾಗಿದ್ದ ಸಂಚಿನ ಬಗ್ಗೆ ವಿವರಿಸಲಾಗಿದೆ.
ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರನ್ನ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗುಂಡಿಕ್ಕಿ ಹತ್ಯೆಗೈದಿತ್ತು. ಬಳಿಕ ಸಲ್ಮಾನ್ ಖಾನ್ ಅವರನ್ನು ಟಾರ್ಗೇಟ್ ಮಾಡಿಕೊಂಡಿದ್ದ ಗ್ಯಾಂಗ್ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ ರೀತಿಯಲ್ಲೇ ಪ್ಲ್ಯಾನ್ ರೂಪಿಸಿತ್ತು. ಸಲ್ಮಾನ್ ಖಾನ್ ಅವರು ಪನ್ವೆಲ್ ಫಾರ್ಮ್ಹೌಸ್ನಿಂದ ಹೊರಬರಲು ಹೊರಟಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಬಳಿಕ ಮುಂಬೈ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿ ವಿಚಾರಿಸಿದಾಗ ಭಯಾನಕ ಸತ್ಯಗಳು ಹೊರಬಿದ್ದಿವೆ.
ಸಲ್ಮಾನ್ ಖಾನ್ ಹತ್ಯೆಗೆ ಆರೋಪಿಗಳು ಪಾಕಿಸ್ತಾನದಿಂದ ಎಕೆ-47, ಎಕೆ-92, ಎಂ-16 ರೈಫಲ್ಗಳನ್ನು ಖರೀದಿಸಲು ಸಿದ್ಧತೆ ನಡೆಸಿದ್ದರು ಎಂದು ಚಾರ್ಜ್ಶೀಟ್ನಲ್ಲಿ ಹೇಳಲಾಗಿದೆ. ಅಲ್ಲದೆ ಈ ಗುಂಪು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ ಜಿಗ್ನಾ ಪಿಸ್ತೂಲ್ ಅನ್ನು ಖರೀದಿಸಲು ಪ್ರಯತ್ನಿಸುತ್ತಿದ್ದರು ಎಂದು ಹೇಳಲಾಗಿದೆ. ಸಲ್ಮಾನ್ ಖಾನ್ ಅವರನ್ನು ಕೊಂದವರಿಗೆ ಬಿಷ್ಣೋಯ್ ಗ್ಯಾಂಗ್ 25 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು ಎಂದು ಮುಂಬೈ ಪೊಲೀಸರು ಹೇಳಿದ್ದಾರೆ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
Click 👇